ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ. [೧] ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವ. ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ.

ಅಂಬಿಗರ ಚೌಡಯ್ಯ
ಜನನಚೌಡೇಶ (ಮೂಲ ಹೆಸರು)

ತಾಯಿ:ಪಂಪಾದೇವಿ

ತಂದೆ: ವಿರೂಪಾಕ್ಷ

೧೧೬೦ (೧೨ನೆ ಶತಮಾನ)
ಚೌಡದಾನಪುರ, ರಾಣಿಬೆನ್ನೂರು ತಾಲೂಕು, ಹಾವೇರಿ ಜಿಲ್ಲೆ, ಕರ್ನಾಟಕ
ಮರಣರಾಣಿಬೆನ್ನೂರು, ಹಾವೇರಿ ಜಿಲ್ಲೆ, ಕರ್ನಾಟಕ
ಅಂಕಿತನಾಮಅಂಬಿಗರ ಚೌಡಯ್ಯ
ವೃತ್ತಿಅಂಬಿಗ
ಇದಕ್ಕೆ ಪ್ರಸಿದ್ಧವಚನ ಸಾಹಿತ್ಯ


ತಾನು ಕೇವಲ ತುಂಬಿದ ಹೊಳೆಯಲ್ಲಿ ದೋಣಿಗೆ ಹುಟ್ಟುಹಾಕುವ ಅಂಬಿಗ ಮಾತ್ರವಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲವುಳ್ಳವ ಎಂದು ಹೇಳಿಕೊಳ್ಳುವುದರಲ್ಲಿ ತನ್ನ ಅನುಭಾವದೃಷ್ಟಿಯನ್ನು ಪ್ರಕಟಿಸಿದ್ದಾನೆ.[೨]

ವಚನಗಳ ಶೈಲಿ, ದೃಷ್ಟಿ

ಉಳಿದ ವಚನಕಾರರ ವಚನಗಳಲ್ಲಿರುವಂತೆ ಇವನಲ್ಲಿಯೂ ಶಿವಾನುಭವಪರವಾದ ವಚನಗಳಿದ್ದರೂ ಅವುಗಳಲ್ಲಿ ಕಂಡುಬರುವ ಸಮಕಾಲೀನ ಸಮಾಜ ವಿಡಂಬನೆಯ ವ್ಯಗ್ರದೃಷ್ಟಿ ಬೇರೆಯವರಲ್ಲಿ ವಿರಳವೆಂದೇ ಹೇಳಬೇಕು.

ಅವನ ವಚನಗಳ ವಸ್ತು, ಭಾಷೆ, ಶೈಲಿ ಗಮನಿಸಿದರೆ ಅವನೊಬ್ಬ ಕೆಚ್ಚೆದೆಯ, ನಿಷ್ಠುರ ಪ್ರಕೃತಿಯ, ಗ್ರಾಮ್ಯ ಮನೋಧರ್ಮದ ಒರಟು ವಚನಕಾರ ಎಂಬುದು ಸ್ಪಷ್ಟವಾಗುತ್ತದೆ. ಅವನು ನ್ಯಾಯನಿಷ್ಠುರ, ದಯಾದಾಕ್ಷಿಣ್ಯಪರನಲ್ಲ. ಯಾರನ್ನೇ ಆಗಲಿ ಯಾವುದನ್ನೇ ಆಗಲಿ ಅವನು ಟೀಕಿಸದೆ ಬಿಡುವುದಿಲ್ಲ. ಅವನು ಮೃದುವಾಗಿ ಮಾತನಾಡುವುದು ಅಪೂರ್ವ; ಮಾತಿನ ಬಹುಭಾಗ ಹರಿತವಾದದ್ದು, ಸಂಸ್ಕಾರದೂರವಾದದ್ದು. ‘ಕೇಳಿರಯ್ಯ ಮಾನವರೇ’, ‘ಶೀಲದಲ್ಲಿ ಸಂಪನ್ನರಾದವರು ನೀವು ಕೇಳಿರೋ’, ‘ನನಗೊಬ್ಬರೆಂಜಲು ಸೇರದೆಂದು ಶುಚಿತನದಲ್ಲಿ ಬದುಕುವ ಬರಿಯ ಮಾತಿನ ಭುಂಜಕರು ನೀವು ಕೇಳಿರೋ’, ‘ಪರಪುರುಷಾರ್ಥವನರಿಯದೆ ಕೆಟ್ಟನರ ಕುರಿಗಳು ನೀವು ಕೇಳಿರೋ’ ಎಂದು ಆರಂಭವಾಗಿ ‘ಮೆಟ್ಟಿದ್ದ ದೊಡ್ಡ ಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆಯೆಂದ’, ‘ಪಡಿಹಾರ ಉತ್ತಣ್ಣನ ಎಡಪಾದರಕ್ಷೆಯಿಂದ ಪಟಪಟನೆ ಹೊಡೆಯೆಂದ’, ‘ಮೂಗ ಕೊಯ್ದು ಇಟ್ಟಂಗಿಯ ಕಲ್ಲಿಲೆ ಸಾಸಿವೆಯ ತಿಕ್ಕಿ ಹಿಟ್ಟಿನ ತಳಿದು ಮೇಲೆ ನಿಂಬೆಯ ಹುಳಿಯನೆ ಹಿಂಡಿ ಪಡುವಲ ಗಾಳಿಗೆ ಹಿಡಿ’-ಹೀಗೆ ಮುಕ್ತಾಯವಾಗುತ್ತದೆ, ಇವನ ವಚನಗಳ ಶೈಲಿ.

ಹಳೆಯ ಮತ್ತು ಹೊಸ ನಂಬಿಕೆಗಳ ಅವಸ್ಥಾಂತರದ ಅವ್ಯವಸ್ಥೆಯಲ್ಲಿದ್ದ ಅಂದಿನ ವೀರಶೈವ ಸಮಾಜದ ಲೋಪದೋಷಗಳನ್ನು ನಿರ್ದಾಕ್ಷಿಣ್ಯವಾಗಿ ಎತ್ತಿ ತೋರಿಸುವ ಅಂಬಿಗರ ಚೌಡಯ್ಯನ ಈ ವಚನಗಳು ಬಹುಶಃ ಅಂದಿನ ಸಾಮಾಜಿಕ ಆವಶ್ಯಕತೆಯ ಪರಿಣಾಮಗಳೆಂದು ನಾವು ಭಾವಿಸಬಹುದು. ಅಂಬಿಗರ ಚೌಡಯ್ಯನ ವಚನಗಳಿಂದ ನಮಗೆ ಕಂಡುಬರುವ ಸಮಾಜದ ಅವ್ಯವಸ್ಥೆಯ ಚಿತ್ರ, ಬೇರೆಯವರಲ್ಲಿ ನಮಗೆ ಇಷ್ಟರಮಟ್ಟಿಗೆ ಕಾಣದು. ಅವನ ವಚನಗಳಲ್ಲಿ ನಿಜಶರಣನ ಮೊರೆತದ ಜೊತೆಗೆ ಸುಧಾರಕನ ಕಟುಟೀಕೆಯೂ ಕೇಳಿಬರುತ್ತದೆ. ಅವನ ವಚನಗಳು ಅನರ್ಥ ಸಾಧಕವಾದ ಕೋಪದಿಂದ ಹೊಮ್ಮಿದುವಲ್ಲ; ಸದರ್ಥಸಾಧಕವಾದ ಸತ್ಕೋಪದಿಂದ ಹೊಮ್ಮಿರುವುವು. ಕನ್ನಡ ಸಾಹಿತ್ಯದಲ್ಲಿ ಈ ಬಗೆಯ ದಿಟ್ಟತನ, ವ್ಯಗ್ರತೆ ಕಂಡುಬರುವುದು ಬಹುಶಃ ಇಬ್ಬರಲ್ಲೇ ಎಂದು ತೋರುತ್ತದೆ. ಒಬ್ಬ ಸಿಡಿಲು ನುಡಿಯ ಸರ್ವಜ್ಞ; ಇನ್ನೊಬ್ಬ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ.

ಉಲ್ಲೇಖಗಳು

"ಅಂಬಿಗರ ಚೌಡಯ್ಯ ವಚನಗಳು". Newsofkannada.in , 21 January 2021


  1. "Popularise Vachanas of Ambigara Chowdaiah: Expert". www.deccanherald.com ,7 August 2017.
  2. "Ambigara Chowdayya anniversary observed". www.thehindu.com ,7 August 2017.

🔥 Top keywords ಕನ್ನಡ Wiki:

ನಂದಮೂರಿ ತಾರಕ ರಾಮಾರಾವ್ರವಿ ಶಾಸ್ತ್ರಿಮುಖ್ಯ ಪುಟವಿಶೇಷ:Searchಕುವೆಂಪುಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಬಿ. ಆರ್. ಅಂಬೇಡ್ಕರ್ಬಸವೇಶ್ವರಪುರಂದರದಾಸದ.ರಾ.ಬೇಂದ್ರೆಕಾಳಿದಾಸಕರ್ನಾಟಕಮಹಾತ್ಮ ಗಾಂಧಿಮೂಲಧಾತುಇತಿಹಾಸಕನ್ನಡ ಸಂಧಿಕೇಂದ್ರಾಡಳಿತ ಪ್ರದೇಶಗಳುಕರ್ನಾಟಕದ ಜಿಲ್ಲೆಗಳುಚಂದ್ರಶೇಖರ ಕಂಬಾರಶಿವರಾಮ ಕಾರಂತಕನ್ನಡ ಅಕ್ಷರಮಾಲೆಭಾರತಎ.ಪಿ.ಜೆ.ಅಬ್ದುಲ್ ಕಲಾಂಭಾರತದ ಸಂವಿಧಾನಕರ್ನಾಟಕದ ಇತಿಹಾಸಕರ್ನಾಟಕದ ನದಿಗಳುಬೆಂಗಳೂರುಸ್ವಾಮಿ ವಿವೇಕಾನಂದಕನ್ನಡ ಗುಣಿತಾಕ್ಷರಗಳುಕನಕದಾಸರುಕನ್ನಡ ಸಾಹಿತ್ಯಮಾಸ್ತಿ ವೆಂಕಟೇಶ ಅಯ್ಯಂಗಾರ್ವಿನಾಯಕ ದಾಮೋದರ ಸಾವರ್ಕರ್ಭಾರತೀಯ ಮೂಲಭೂತ ಹಕ್ಕುಗಳುಭಾರತದ ರಾಷ್ಟ್ರಪತಿಗಳ ಪಟ್ಟಿಅಭಿಜ್ಞಾನ ಶಾಕುಂತಲಮ್ಗುಣ ಸಂಧಿಗಿರೀಶ್ ಕಾರ್ನಾಡ್ಆದೇಶ ಸಂಧಿಕರ್ನಾಟಕದ ರಾಜ್ಯಪಾಲರುಗಳ ಪಟ್ಟಿಕನ್ನಡಹಂಪೆಭೂಮಿವಿಶೇಷ:RecentChangesಕಿತ್ತೂರು ಚೆನ್ನಮ್ಮಜವಾಹರ‌ಲಾಲ್ ನೆಹರುಜ್ಞಾನಪೀಠ ಪ್ರಶಸ್ತಿಭಾರತದ ಇತಿಹಾಸಕರ್ನಾಟಕದ ಮುಖ್ಯಮಂತ್ರಿಗಳುಬುದ್ಧಭಾರತದ ಪ್ರಧಾನ ಮಂತ್ರಿಗಳ ಪಟ್ಟಿಅಕ್ಕಮಹಾದೇವಿಜಾನಪದಮೂಲಧಾತುಗಳ ಪಟ್ಟಿವರ್ಗೀಯ ವ್ಯಂಜನಅಕ್ಷಾಂಶ ಮತ್ತು ರೇಖಾಂಶಸಾಮ್ರಾಟ್ ಅಶೋಕಸೂಫಿಪಂಥಕನ್ನಡ ಸಾಹಿತ್ಯ ಪ್ರಕಾರಗಳುಸರ್ವಜ್ಞಮಲ್ಲಿಗೆಗಾದೆವಿಜ್ಞಾನಅರ್ಥಶಾಸ್ತ್ರಆಗಮ ಸಂಧಿಲೋಪಸಂಧಿಯು.ಆರ್.ಅನಂತಮೂರ್ತಿರಾಮಾಯಣವ್ಯಂಜನಸ್ವರಮೈಸೂರುಗೌತಮ ಬುದ್ಧವಿಕಿಪೀಡಿಯ:ಯೋಜನೆ/ಸಂತ ಅಲೋಶಿಯಸ್ ಕಾಲೇಜು ವಿಕಿಪೀಡಿಯ ಅಸೋಸಿಯೇಶನ್ ೨೦೨೧-೨೨ಕರ್ನಾಟಕದ ತಾಲೂಕುಗಳುಕನ್ನಡ ವ್ಯಾಕರಣಶಿಶುನಾಳ ಶರೀಫರುಪರಮಾಣುಮಣ್ಣು🡆 More