ಕಾಳಿಂಗ ನಾವಡ

ಈ ಲೇಖನ ಅಥವಾ ವಿಭಾಗವನ್ನು ಮಾರ್ಗದರ್ಶಿ ವಿನ್ಯಾಸ ಮತ್ತು ಕೈಪಿಡಿಯ ಶೈಲಿ ಪುಟಗಳಲ್ಲಿ ಸೂಚಿಸಿರುವಂತೆ ವಿಕೀಕರಣ (format) ಮಾಡಬೇಕಿದೆ.

"ಗಾನ ಕೋಗಿಲೆ" ಕಾಳಿಂಗ ನಾವಡರು(ಆಡು ಬಾಷೆಯಲ್ಲಿ ನಾವುಡ)ಹುಟ್ಟಿದ್ದು ಜೂನ್ ೬ ೧೯೫೮ನೇ ಇಸವಿಯಲ್ಲಿ. ಸಾಲಿಗ್ರಾಮ ಸಮೀಪದ ಗುಂಡ್ಮಿ ಅನ್ನುವ ಪುಟ್ಟ ಹಳ್ಳಿಯಲ್ಲಿ, ರಾಮಚಂದ್ರ ನಾವುಡ ಪದ್ಮಾವತಿ ದಂಪತಿಗಳ ಐದನೇ ಕೂಸು. ತಂದೆ ರಾಮಚಂದ್ರ ನಾವಡರು ಕೂಡಾ ಆ ಕಾಲದ ಹೆಸರಾಂತ ಭಾಗವತರು. ಹಾಗಾಗಿ ಸಹಜವಾಗಿಯೇ ನಾವುಡರಿಗೆ ಬಾಲ್ಯದಲ್ಲಿಯೇ ಯಕ್ಷಗಾನದ ಕುರಿತು ಆಸಕ್ತಿ ಮೂಡಿಸುವ ಪೂರಕ ರಂಗಸ್ಥಳವು ಅವರ ಮನೆಯಲ್ಲಿಯೇ ಸಿದ್ಧಿಸಿತ್ತು. ತಂದೆ ರಾಮಚಂದ್ರ ನಾವಡರಿಂದ ಎಳೆಯ ವಯಸ್ಸಿನಲ್ಲಿಯೇ ಭಾಗವತಿಕೆಯ ಪಟ್ಟುಗಳನು ಕರತಲಾಮಲಕ ಮಾಡಿಕೊಂಡ ನಾವುಡರಿಗೆ ಮನೆಯೇ ಮೊದಲ ಪಾಠಶಾಲೆ ತಂದೆಯೇ ಮೊದಲ ಗುರು. ಜನ್ಮಜಾತವಾಗಿ ಬಂದ ಪ್ರತಿಭೆಗೆ ಹಾಗು ಅವರಲ್ಲಿದ್ದ ಆಸಕ್ತಿಗೆ ನೀರೆರೆದ ಪೋಷಕರು ಅವರನ್ನು ಆ ಕಾಲದ ಸುಪ್ರಸಿದ್ಧ ಭಾಗವತರಾದ ನಾರಾಯಣ ಉಪ್ಪೂರರ ಗರಡಿಯಲ್ಲಿ ಬಿಟ್ಟರು. ಈ ಎಳೆಯ ತರುಣ ತಮ್ಮ ಪರಂಪರಾಗತ ಭಾಗವತಿಕೆಯನ್ನು ಮುಂದುವರಿಸಲು ಸಮರ್ಥನೆಂದು ಬಹುಬೇಗನೆ ಮನಗಂಡ ಉಪ್ಪೂರರು ತಮ್ಮ ಅನುಭವವನ್ನೆಲ್ಲ ತಮ್ಮ ಸಾಲಿಗ್ರಾಮದ ಹಂಗಾರಕಟ್ಟೆಯ 'ಯಕ್ಷ ಕಲಾ ಕೇಂದ್ರ-ಭಾಗವತ ತರಬೇತಿ ಕೇಂದ್ರ'ದಲ್ಲಿ ಕಾಳಿಂಗ ನಾವಡರಿಗೆ ಶಿಕ್ಷಣ ನೀಡಿದರು. ಶ್ರೀ ನಾರಣಪ್ಪ ಉಪ್ಪೂರುರವರ ಜೊತೆಗೂಡಿ, ೧೯೭೨ ರಲ್ಲಿ, ಅಂದರೆ ಕೇವಲ ೧೪ ನೇ ವಯಸ್ಸಿನಲ್ಲಿ ಮುಖ್ಯ ಭಾಗವತರಾಗಿ ಕೋಟ ಶ್ರೀ ಅಮೃತೇಶ್ವರಿ ಮೇಳದಿಂದ ತಮ್ಮ ಯಕ್ಷಕಲಾ ಸೇವೆ ಆರಂಭಿಸಿದರು. ಉಪ್ಪೂರರ ತಂಡವನ್ನು ಸೇರಿದ ನಾವಡರು ಸರಿಸುಮಾರು ೫-೬ ವರ್ಷಗಳ ಕಾಲ ಅವರ ಜೊತೆಯಲ್ಲಿಯೇ ತಿರುಗಾಟವನ್ನು ಮುಂದುವರೆಸಿದರು. ೧೯೭೭ರಲ್ಲಿ ಪೆರ್ಡೂರಿನ ವಿಜಯಶ್ರೀ ಮೇಳಕ್ಕೆ ಭಾಗವತರಾಗಿ ಸೇರ್ಪಡೆಗೊಂಡ ನಾವುಡರು ಬಹುಬೇಗನೆ ಜನಮನವನ್ನು ಸೂರೆಗೊಂಡರು, ನಾವಡರ ಭಾಗವತಿಕೆ ಜನಜನಿತವಾಯ್ತು. ಅಲ್ಲಿಂದ ಮುಂದೆ ಸಾಲಿಗ್ರಾಮ ಮೇಳಕ್ಕೆ ಪದಾರ್ಪಣೆ ಮಾಡಿದ ನಾವುಡರು ಆ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ. ಹೋದಹೋದೆಡೆಯೆಲ್ಲ ಅಭಿಮಾನಿಗಳು ಸೃಷ್ಟಿಯಾದರು, ಯಕ್ಷಪ್ರೇಮಿಗಳು ಹುಚ್ಚೆದ್ದುಹೋದರು, ನೋಡನೋಡುತ್ತಿರುವಂತೆಯೇ ಕಾಳಿಂಗ ನಾವುಡರ ಕೀರ್ತಿ ಪತಾಕೆ ಎಲ್ಲೆಡೆಯೂ ರಾರಾಜಿಸತೊಡಗಿತು, ಕರಾವಳಿ ಕರ್ನಾಟಕದ ತುಂಬೆಲ್ಲಾ ಕಾಳಿಂಗ ನಾವಡರ ಕಂಚಿನ ಕಂಠದ ಘಂಟಾನಿನಾದವು ಕೇಳಿಬರತೊಡಗಿತು.ತಮ್ಮ ಮೂವತ್ತೆರಡನೆಯ ವಯಸ್ಸಿಗೇ ಸಮಕಾಲೀನ ಭಾಗವತರ್ಯಾರೂ ತಲುಪಲಾಗದ ಎತ್ತರದ ಪೀಠದಲ್ಲಿ ನಾವಡರು ವಿರಾಜಮಾನರಾದರು.೧೯೮೩ರಲ್ಲಿ ಶ್ರೀಮತಿ ವಿಜಯಶ್ರೀಯವರನ್ನು ಮದುವೆಯಾದ ಕಾಳಿಂಗ ನಾವಡರಿಗೆ "ಆಗ್ನೇಯ ನಾವಡ" ಎಂಬ ಮಗನಿದ್ದಾರೆ.

ಕಾಳಿಂಗ ನಾವಡ
ಕಾಳಿಂಗ ನಾವಡ

ಜಿ.ಆರ್.ಕಾಳಿಂಗ ನಾವಡ.


ಯಕ್ಷಗಾನ ರಂಗದ ತುಂಬೆಲ್ಲಾ ಅತಿರಥ-ಮಹಾರಥರಂತಹ ಘಟಾನುಘಟಿಗಳು ವಿಜೃಂಭಿಸುತ್ತಿದ್ದ ಉತ್ತುಂಗದ ಕಾಲದಲ್ಲಿ, ಎಳೆಯ ವಯಸ್ಸಿನಲ್ಲಿಯೇ ತನ್ನ ಜನ್ಮಜಾತ ಪ್ರತಿಭೆಯ ಬಲದಿಂದ ಬಹುಬೇಗನೆ ಕೀರ್ತಿಯ ಉತ್ತುಂಗ ಶಿಖರವನ್ನೇರುವ ಸೌಭಾಗ್ಯ ಪಡೆದು ಬಂದವರು ಕಾಳಿಂಗ ನಾವುಡರು. ಯಕ್ಷಗಾನದ ಬಗ್ಗೆ ಆಸಕ್ತಿಕಳೆದುಕೊಂಡು ದೂರಸರಿಯುತ್ತಿದ್ದ ಜನಮಾನಸದ ಚಿತ್ತವನ್ನಾಕರ್ಷಿಸಿ ಮತ್ತೆ ಯಕ್ಷಗಾನದತ್ತ ಎಳೆದು ತರುವ ಶಕ್ತಿ ಇತ್ತು ಆ ಮಾಂತ್ರಿಕ ಕಂಠಕ್ಕೆ. ಒಮ್ಮೆ ಇವರ ಗಾನ ವೈಭವದ ಸವಿಯನ್ನುಂಡವರು ಶಾಶ್ವತವಾಗಿ ಇವರ ಅಭಿಮಾನಿಗಳೇ ಆದರು. ಅವರಿದ್ದ ಮೇಳದ ಆಟ ನಡೆಯುತ್ತಿರುವಲ್ಲಿ ಸೇರುತ್ತಿದ್ದ ಜನರ ಸಮೂಹದಲ್ಲಿ ಅರ್ಧಕ್ಕೂ ಮಿಕ್ಕಿದಷ್ಟು ಮಂದಿ ಅವರ ಗಾನಸುಧೆಯನ್ನು ಸವಿಯಲೆಂದೇ ಬಂದಿರುವರಾಗಿರುತ್ತಿದ್ದರು ಅನ್ನುವುದು ಅತಿಶಯೋಕ್ತಿಯೇನಲ್ಲ. ತಮ್ಮ ವಿಶಿಷ್ಟ ಧ್ವನಿಯ ಛಾಪಿನಿಂದ ಕೇಳುಗರನ್ನು ಮಂತ್ರಮುಗ್ಧರನ್ನಾಗಿಸುತ್ತಿದ್ದ ಬಲು ಅಪರೂಪದ ಕಂಠಸಿರಿಯಿಂದಾಗಿ ಕಾಳಿಂಗ ನಾವಡರು ತಮ್ಮದೇ ಆದ ಹೊಸತೊಂದು ಪರಂಪರೆಯನ್ನು ಹುಟ್ಟುಹಾಕಿದರು. ಒಂದರ್ಥದಲ್ಲಿ ಭಾಗವತಿಕೆ ಅನ್ನುವ ಪದಕ್ಕೆ ಪರ್ಯಾಯ ಅನ್ನುವಂತೆ ಇದ್ದವರು ನಾವಡರು.

ನವೆಂಬರ್ ೧೯೮೮ ರಲ್ಲಿ ಬಹ್ರೈನ್ ನಲ್ಲಿ ನಡೆದ ಕನ್ನಡ ಕೂಟದ ಸಮಾರಂಭದ ಯಕ್ಷಗಾನದಲ್ಲಿ ಶ್ರೀ ಕಾಳಿಂಗ ನಾವಡರ ಭಾಗವತಿಕೆ ಎಲ್ಲರ ಮನ ಸೂರೆಗೊಂಡಿತ್ತು.ಶ್ರೀ ಕಾಳಿಂಗ ನಾವಡರು ಹಾಗೂ ಚಿಟ್ಟಾಣಿ ರಾಮಚಂದ್ರ ಹೆಗ್ಗಡೆಯವರು, ಆ ಕಾಲದಲ್ಲೇ ಮುಂಬಯಿಗೆ ಹೋಗಿ, ವರ್ಷವೊಂದರಲ್ಲಿ 'ಭಸ್ಮಾಸುರ ಮೋಹಿನಿ' ಪ್ರಸಂಗವೊಂದನ್ನೇ ನಲವತ್ತಕ್ಕೂ ಹೆಚ್ಚು ಬಾರಿ ಆಡಿ, ಯಕ್ಷಗಾನಕ್ಕೆ ಅಷ್ಟೇನೂ ಆಸಕ್ತಿಯಿಲ್ಲದಿದ್ದ ಮುಂಬಯಿಯಲ್ಲಿ ಯಕ್ಷಗಾನಕ್ಕೊಂದು ಸ್ಪಷ್ಟ ನೆಲೆ ಕಲ್ಪಿಸಿದ ಕೀರ್ತಿ ಇವರಿಬ್ಬರದು.ನಾವಡರ 'ಎಲ್ಲೆಲ್ಲೂ ಸೊಬಗಿದೆ, ಎಲ್ಲೆಲ್ಲೂ ಸೊಗಸಿದೆ.........', 'ನೀಲ ಗಗನದೊಳು ಮೇಘಗಳ ಕಂಡಾಗಲೇ ನವಿಲು ಕುಣಿಯುತಿದೆ......' ಮುಂತಾದ ಪದ್ಯಗಳನ್ನು ಕೇಳಿದಾಗ ಇಂದಿಗೂ ಮೈ ನವಿರೇಳುತ್ತದೆ.

ರೇವತಿ, ಕಲಾವತಿ, ಚಾಂದ್, ಬಿಹಾಗ್ ಮುಂತಾದ ರಾಗಗಳನ್ನು ಯಕ್ಷಗಾನಕ್ಕೆ ಅಳವಡಿಸಿ, ತಮ್ಮ ಕಂಠಸಿರಿಯಿಂದ ಯಕ್ಷಗಾನಕ್ಕೆ ಹೊಸ ಭಾಷ್ಯ ಬರೆದ ನಾವುಡರು 'ಅಮೃತಮತಿ, ಕಾಂಚನಶ್ರೀ, ವಿಜಯಶ್ರೀ, ರೂಪಶ್ರೀ, ಭಾಗ್ಯಶ್ರೀ, ನಾಗಶ್ರೀ' ಮುಂತಾದ ಪ್ರಸಿದ್ದ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಜೀವಮಾನವಿಡೀ ಪ್ರಯತ್ನಿಸಿದರೂ ಸಾಧಿಸಲು ಅಸಾಧ್ಯವಾದುದನ್ನು ಕೆಲವೇ ಕೆಲವು ವರ್ಷಗಳಲ್ಲಿ ಸಾಧಿಸಿದವರು. 1990ರಲ್ಲಿ ಕರ್ನಾಟಕ ಸರಕಾರ ಮರಣೋತ್ತರವಾಗಿ 'ರಾಜ್ಯೋತ್ಸವ ಪ್ರಶಸ್ತಿ'ಯನ್ನು ನೀಡಿ ಗೌರವಿಸಿದೆ. ಹಾಗೆಯೇ ಯಕ್ಷಕಲಾರಸಿಕರಿಂದ 'ಕರಾವಳಿ ಕೋಗಿಲೆ', 'ರಸರಾಗ ಚಕ್ರವರ್ತಿ' ಮುಂತಾದ ಬಿರುದುಗಳು, ಸನ್ಮಾನಗಳು, ಪ್ರಶಸ್ತಿಗಳು ನಾವಡರಿಗೆ ಸಂದಿವೆ.

ಯಕ್ಷಗಾನ ಹಾಗೂ ನಾಟಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ "ಕಲಾ ಕದಂಬ ಆರ್ಟ್ ಸೆಂಟರ್" ಸಂಸ್ಥೆ ಯಕ್ಷ ಸಾಧಕರಿಗೆ ಪ್ರತಿ ವರ್ಷ ‘ಕಾಳಿಂಗ ನಾವಡ’ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.


ಮೇ ೨೭ ೧೯೯೦ ನೇ ಇಸವಿಯಲ್ಲಿ ೩೨ರ ಹರೆಯದ ತರುಣ ಗಾನ ಕೋಗಿಲೆಯ ಹಾಡು ಸ್ತಬ್ಧವಾಯಿತು. ರಸ್ತೆ ಅಪಘಾತವೊಂದರಲ್ಲಿ ನಾವಡರು ವಿಧಿವಶರಾದಾಗ ಯಕ್ಷಗಾನಲೋಕದ ಸುವರ್ಣಯುಗವೊಂದು ಅಂತ್ಯವಾಯಿತು. ಯಕ್ಷರಸಿಕರ ಪಾಲಿಗೆ ಬರಸಿಡಿಲೆರಗಿದಂತೆ ಬಂದಪ್ಪಳಿಸಿದ ಈ ದುರಂತವಾರ್ತೆಯನ್ನು ಕೇಳಿ ಕ್ಷಣಾರ್ಧದಲ್ಲಿ ಇಡೀ ಕರಾವಳಿಯ ಕಡಲತೀರವು ಶೋಕಸಾಗರದಲ್ಲಿ ಮುಳುಗಿತು. ಜೀವಮಾನವಿಡೀ ಪ್ರಯತ್ನಿಸಿದರೂ ಸಾಧಿಸಲು ಅಸಾಧ್ಯವಾದುದನ್ನು ಕೆಲವೇ ಕೆಲವು ವರ್ಷಗಳಲ್ಲಿ ಸಾಧಿಸಿ ತೆರಳಿದ "ಕರಾವಳಿಯ ಗಾನಕೋಗಿಲೆ" ಗುಂಡ್ಮಿ ಕಾಳಿಂಗ ನಾವಡರಿಗೆ "ನಮನ".

ಹೆಚ್ಚಿನ ಓದಿಗೆ

ಉಲ್ಲೇಖ

Tags:

en:Wikipedia:Glossaryen:Wikipedia:Guide to layouten:Wikipedia:Manual of Style

🔥 Trending searches on Wiki ಕನ್ನಡ:

ಬಿದಿರುಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಗುಡುಗುಕನ್ನಡ ಸಂಧಿವಿಕಿಪೀಡಿಯವಸ್ತುಸಂಗ್ರಹಾಲಯವಿಷಮಶೀತ ಜ್ವರಊಟಆಲೂರು ವೆಂಕಟರಾಯರುಮೀನಾ (ನಟಿ)ರಾಯಲ್ ಚಾಲೆಂಜರ್ಸ್ ಬೆಂಗಳೂರುಶಬ್ದಮಣಿದರ್ಪಣಸಾರಾ ಅಬೂಬಕ್ಕರ್ಕಪ್ಪೆಸಿದ್ಧಯ್ಯ ಪುರಾಣಿಕಗೋತ್ರ ಮತ್ತು ಪ್ರವರಕಲ್ಲಿದ್ದಲುಯುವರತ್ನ (ಚಲನಚಿತ್ರ)ಗದ್ದಕಟ್ಟುಜಾಗತೀಕರಣಕನ್ನಡ ರಾಜ್ಯೋತ್ಸವಐಹೊಳೆಯಲ್ಲಮ್ಮ ದೇವಿ ದೇವಸ್ಥಾನ ಸವದತ್ತಿನ್ಯೂಟನ್‍ನ ಚಲನೆಯ ನಿಯಮಗಳುಯಕ್ಷಗಾನವಾಲಿಬಾಲ್ಕಪ್ಪುನವರತ್ನಗಳುಶರಣಬಸವೇಶ್ವರ ದೇವಸ್ಥಾನ ಕಲಬುರಗಿಭಾರತೀಯ ರಾಷ್ಟ್ರೀಯ ಕಾಂಗ್ರೆಸ್ತೆಲುಗುಬ್ಯಾಡ್ಮಿಂಟನ್‌ಕಾಲಾಯ ತಸ್ಮೈ ನಮಃ (ಚಲನಚಿತ್ರ)ಕುಡಿಯುವ ನೀರುಗಂಗ (ರಾಜಮನೆತನ)ಸಂಸ್ಕೃತಭಾರತದ ಉಪ ರಾಷ್ಟ್ರಪತಿಹೃದಯಧೂಮಕೇತುಗೂಬೆಸಾವಿತ್ರಿಬಾಯಿ ಫುಲೆಗೌತಮ ಬುದ್ಧಜಾತ್ರೆಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಜೈನ ಧರ್ಮಯೇಸು ಕ್ರಿಸ್ತಪ್ರಸ್ಥಭೂಮಿಬಿ. ಎಂ. ಶ್ರೀಕಂಠಯ್ಯಚಂಡಮಾರುತಭಾರತದ ಉಪ ರಾಷ್ಟ್ರಪತಿಗಳ ಪಟ್ಟಿಜಾತಿಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ)ಮಾನವನ ನರವ್ಯೂಹಭಾರತದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಹರಿದಾಸಋತುಶಿಕ್ಷಣಪ್ರಜಾವಾಣಿಚೀನಾದ ಇತಿಹಾಸವರ್ಣಾಶ್ರಮ ಪದ್ಧತಿಕೋಲಾರ ಚಿನ್ನದ ಗಣಿ (ಪ್ರದೇಶ)ನುಡಿಗಟ್ಟುಬ್ಯಾಸ್ಕೆಟ್‌ಬಾಲ್‌ರೇಯಾನ್ಕನ್ನಡ ಸಾಹಿತ್ಯ ಪರಿಷತ್ತುಪಕ್ಷಿಮೊದಲನೇ ಅಮೋಘವರ್ಷ2020 ಬೇಸಿಗೆ ಪ್ಯಾರಾಲಿಂಪಿಕ್ಸ್ಭಗತ್ ಸಿಂಗ್ಸ್ನಾಯುಗಿರೀಶ್ ಕಾರ್ನಾಡ್ಮಿನ್ನಿಯಾಪೋಲಿಸ್ಪಿತ್ತಕೋಶಶುಭ ಶುಕ್ರವಾರವಡ್ಡಾರಾಧನೆಹೊಯ್ಸಳದೂರದರ್ಶನ🡆 More