ತಾಳಿಕೋಟಿ ನಗರವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿದೆ.
ತಾಳಿಕೋಟಿ ನಗರವು ಜಿಲ್ಲಾ ಕೇಂದ್ರ ವಿಜಯಪುರದಿಂದ ಸುಮಾರು ೭೦ ಕಿ. ಮಿ. ದೂರ ಇದೆ. ಕರ್ನಾಟಕ ಸರ್ಕಾರವು ಫೆಬ್ರುವರಿ ೮, ೨೦೧೩ ರಂದು ವಾರ್ಷಿಕ ಮುಂಗಡ ಪತ್ರದ ಪ್ರಕಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪಟ್ಟಣವನ್ನು ಹೊಸ ತಾಲ್ಲೂಕು ಎಂದು ರಚಿಸಿದೆ.
ತಾಳಿಕೋಟ ತಾಲ್ಲೂಕು ತಾಳಿಕೋಟಿ | |
---|---|
village | |
Population (೨೦೧೨) | |
• Total | ೩೫೦೦೦ |
ತಾಳಿಕೋಟಿಯಲ್ಲಿ ಒಳ್ಳೆಯ ಶಿಕ್ಷಣ ಕೇಂದ್ರ, ವ್ಯಾಪಾರ ಕೇಂದ್ರ, ಹಣಕಾಸು ಕೇಂದ್ರ, ಸಾರಿಗೆ ಕೇಂದ್ರ, ನೆಮ್ಮದಿ ಕೇಂದ್ರ, ಉಪ ತಹಶಿಲ್ದಾರರ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ರೈತ ಸಂಪರ್ಕ ಕೇಂದ್ರ, ಬಸ್ ನಿಲ್ದಾಣ, ಅಂಚೆ ಕಚೇರಿ, ಬ್ಯಾಂಕಗಳು ಹಾಗೂ ಇತರೆ ಕಚೇರಿಗಳಿವೆ.
ತಾಳಿಕೋಟಿ ನಗರವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.
ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.
ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.
ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.
ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.
ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.
ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.
ಆಹಾರ ಬೆಳೆಗಳು
ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ
ವಾಣಿಜ್ಯ ಬೆಳೆಗಳು
ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.
ತರಕಾರಿ ಬೆಳೆಗಳು
ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.
ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.
ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.
ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಪ್ರತಿವರ್ಷ ಶ್ರೀ ಖಾಸ್ಗತೇಶ್ವರ ಜಾತ್ರಾ ಮಹೋತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಪ್ರಮುಖ ಶಿಕ್ಷಣ ಸಂಸ್ಥೆಗಳು
ತಾಳಿಕೋಟಿ ಗ್ರಾಮವು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನ ಸಭಾ ಕ್ಷೇತ್ರ ಹಾಗೂ ವಿಜಯಪುರ ಲೋಕ ಸಭಾ ಕ್ಷೇತ್ರ ದ ವ್ಯಾಪ್ತಿಯಲ್ಲಿ ಬರುತ್ತದೆ.
ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ.
ಗ್ರಾಮದಲ್ಲಿ ಸರಕಾರಿ ಪಶು ಆಸ್ಪತ್ರೆ ಇದೆ.
ಗ್ರಾಮದ ಪೋಲಿಸ್ ಠಾಣೆಯು ಸುತ್ತಲಿನ ಸುಮಾರು ೫೦ಕ್ಕೂ ಹೆಚ್ಚು ಹಳ್ಳಿಗಳ ವಾಪ್ತಿ ಹೊಂದಿದೆ.
೩೩ಕೆವಿ ವಿದ್ಯುತ್ ಪರಿವರ್ತನಾ ಕೇಂದ್ರವು ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಿಗೆ ವಿದ್ಯುತ್ ಒದಗಿಸುತ್ತದೆ.
ಗ್ರಾಮದಲ್ಲಿ ನೆಮ್ಮದಿ ಕೇಂದ್ರವಿದೆ.
ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.
ತಾಳಿಕೋಟಿ - 586214
|
ಕನ್ನಡ ಭಾಷೆಯ ಚಲನಚಿತ್ರ ಹಾಸ್ಯ ನಟರು, ನಾಟಕಕಾರರು ಆದ ರಾಜು ತಾಳಿಕೋಟಿಯವರು ತಾಳಿಕೋಟಿ ಗ್ರಾಮದವರು.
This article uses material from the Wikipedia ಕನ್ನಡ article ತಾಳಿಕೋಟ ತಾಲ್ಲೂಕು, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.