ವಿಶ್ವ ಕನ್ನಡ ಸಮ್ಮೇಳನ
ವಿಶ್ವ ಕನ್ನಡ ಸಮ್ಮೇಳನವು ಜಗತ್ತಿನಾದ್ಯಂತ ಹರಡಿರುವ ಕನ್ನಡಿಗರನ್ನು ಒಗ್ಗೂಡಿಸಿ ಕನ್ನಡ ನಾಡು-ನುಡಿಗೆ ಸಂಬಂಧಿಸಿದ ವಿಷಯಗಳನ್ನು ಕುರಿತು ನಡೆಸುವ ಸಮ್ಮೇಳನ. ಈವರೆಗೆ ವಿಶ್ವ ಕನ್ನಡ ಸಮ್ಮೇಳನವು ಎರಡು ಬಾರಿ ನಡೆದಿದೆ. ಇನ್ನು ಮುಂದೆ ಐದು ವರ್ಷಗಳಿಗೊಮ್ಮೆ ನಡೆಸುವ ಯೋಜನೆಯನ್ನು ಎರಡನೆಯ ಸಮ್ಮೇಳನದಲ್ಲಿ ಘೋಷಿಸಲಾಗಿದೆ.
ಮೊದಲನೆಯ ವಿಶ್ವ ಕನ್ನಡ ಸಮ್ಮೇಳನ
ಮೊದಲನೆಯ ವಿಶ್ವ ಕನ್ನಡ ಸಮ್ಮೇಳನವು ೧೯೮೫ರಲ್ಲಿ ಮೈಸೂರಿನಲ್ಲಿ ನಡೆಯಿತು. ಸಾಹಿತಿ ಶಿವರಾಮ ಕಾರಂತರ ಅಧ್ಯಕ್ಷತೆಯಲ್ಲಿ ರಾಷ್ಟ್ರಕವಿ ಕುವೆಂಪುರವರು ಈ ಸಮ್ಮೇಳನವನ್ನು ಉದ್ಘಾಟಿಸಿದರು.
ಎರಡನೆಯ ವಿಶ್ವ ಕನ್ನಡ ಸಮ್ಮೇಳನ
ಎರಡನೆಯ ವಿಶ್ವ ಕನ್ನಡ ಸಮ್ಮೇಳನವು ೨೦೧೧ರ ಮಾರ್ಚ್ ೧೧, ೧೨, ೧೩ರಂದು ಬೆಳಗಾವಿಯಲ್ಲಿ ನಡೆಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿಯವರು ಈ ಸಮ್ಮೇಳನವನ್ನು ಉದ್ಘಾಟಿಸಿದರು. ವಿಶೇಷ ಅತಿಥಿಯಾಗಿ ಶ್ರೀಮತಿ ಐಶ್ವರ್ಯಾ ರೈ ಬಚ್ಚನ್ ಭಾಗವಹಿಸಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನಾಡೋಜ ದೇ ಜವರೇಗೌಡರು ವಹಿಸಿದ್ದರು.ಈ ಸಮ್ಮೇಳನಕ್ಕಾಗಿ ಸಾವಿರಾರು ಜನ ದೇಶ ವಿದೇಶಗಳಿಂದ ಆಗಮಿಸಿದ್ದರು.