ಸಿದ್ದಾಪೂರ

ಸಿದ್ದಾಪುರ ತಾಲ್ಲೂಕು ಕರ್ನಾಟಕ ರಾಜ್ಯದ ಉತ್ತರಕನ್ನಡ ಜಿಲ್ಲೆಯ ಉತ್ತರಕನ್ನಡ ತಾಲ್ಲೂಕಿನಲ್ಲಿದೆ.

ಸಿದ್ದಾಪೂರ
ಸಿದ್ದಾಪುರ
village

ಭೌಗೋಳಿಕ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

  • ಬೆಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಜನಸಂಖ್ಯೆ

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.

ಸಾಂಸ್ಕೃತಿಕ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ

ಸಿದ್ದಾಪೂರ 
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಧರ್ಮ

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆ

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯ

  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ
  • ಶ್ರೀ ಹಣಮಂತ ದೇವಾಲಯ

ಮಸೀದಿ

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಗ್ರಾಮದ ಪ್ರತಿಶತ 50 ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಕಾಲುವೆ

ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟುಯಿಂದ ಮುಳವಾಡ ಏತ ನೀರಾವರಿ ಕಾಲುವೆ ಕಾಲುವೆಯಿದ್ದು ಗ್ರಾಮದಲ್ಲಿ ಸಂಪೂರ್ಣ ಕೃಷಿಗೆ ಸಹಕಾರಿಯಾಗಿದೆ.

ಕೃಷಿ ಮತ್ತು ತೋಟಗಾರಿಕೆ

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು ೭೫% ಜನರು ಕೆಲಸ ಮಾಡುತ್ತಾರೆ. ಗ್ರಾಮದಲ್ಲಿ ಕೇವಲ ೧೫% ಭೂಮಿ ಮಾತ್ರ ನೀರಾವರಿ ಹೊಂದಿದೆ. ಉಳಿದ ೮೫% ಭೂಮಿ ಮಳೆಯನ್ನೇ ಅವಲಂಭಿಸಿದೆ.

ಆರ್ಥಿಕತೆ

ಗ್ರಾಮದಲ್ಲಿ ಆರ್ಥಿಕ ವ್ಯವಸ್ಥೆ ಮಧ್ಯಮ ತರಗತಿಯಲ್ಲಿದೆ.

ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆ

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ


ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.


ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಸಸ್ಯ

ಆಲದ ಮರ, ಬೇವಿನ ಮರ, ಜಾಲಿ ಮರ, ಹೈಬ್ರೀಡ್ ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ, ಕೋಗಿಲೆ ಇತ್ಯಾದಿ.

ಹಬ್ಬ

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಸಾಕ್ಷರತೆ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ವಿಜಯಪುರ

ಕರ್ನಾಟಕ

Tags:

ಸಿದ್ದಾಪೂರ ಭೌಗೋಳಿಕಸಿದ್ದಾಪೂರ ಹವಾಮಾನಸಿದ್ದಾಪೂರ ಜನಸಂಖ್ಯೆಸಿದ್ದಾಪೂರ ಸಾಂಸ್ಕೃತಿಕಸಿದ್ದಾಪೂರ ಕಲೆ ಮತ್ತು ಸಂಸ್ಕೃತಿಸಿದ್ದಾಪೂರ ಧರ್ಮಸಿದ್ದಾಪೂರ ಭಾಷೆಸಿದ್ದಾಪೂರ ದೇವಾಲಯಸಿದ್ದಾಪೂರ ಮಸೀದಿಸಿದ್ದಾಪೂರ ನೀರಾವರಿಸಿದ್ದಾಪೂರ ಕಾಲುವೆಸಿದ್ದಾಪೂರ ಕೃಷಿ ಮತ್ತು ತೋಟಗಾರಿಕೆಸಿದ್ದಾಪೂರ ಆರ್ಥಿಕತೆಸಿದ್ದಾಪೂರ ಉದ್ಯೋಗಸಿದ್ದಾಪೂರ ಬೆಳೆಸಿದ್ದಾಪೂರ ಸಸ್ಯಸಿದ್ದಾಪೂರ ಪ್ರಾಣಿಸಿದ್ದಾಪೂರ ಹಬ್ಬಸಿದ್ದಾಪೂರ ಶಿಕ್ಷಣಸಿದ್ದಾಪೂರ ಸಾಕ್ಷರತೆಸಿದ್ದಾಪೂರ ರಾಜಕೀಯಸಿದ್ದಾಪೂರಕರ್ನಾಟಕಸಿದ್ದಾಪುರ

🔥 Trending searches on Wiki ಕನ್ನಡ:

ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಕೊರಿಯನ್ ಯುದ್ಧಇಮ್ಮಡಿ ಪುಲಿಕೇಶಿಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ೨೦೨೦ಅಲಂಕಾರಮೊಜಿಲ್ಲಾ ಫೈರ್‌ಫಾಕ್ಸ್ಸಾಮಾಜಿಕ ಸಮಸ್ಯೆಗಳುಚಂದ್ರಶೇಖರ ಕಂಬಾರತೀರ್ಪುದೇವತಾರ್ಚನ ವಿಧಿಭಾರತದ ಇತಿಹಾಸಬೇಲೂರುರಾಜಧಾನಿಗಳ ಪಟ್ಟಿಕರ್ನಾಟಕದ ನದಿಗಳುಏರ್ ಇಂಡಿಯಾ ಉಡ್ಡಯನ 182ಗರಗಸಕೋವಿಡ್-೧೯ಚಂದ್ರಯಾನ-೩ವಿಜಯ ಕರ್ನಾಟಕಜಾಗತಿಕ ತಾಪಮಾನ ಏರಿಕೆತಾಳಗುಂದ ಶಾಸನರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಕನ್ನಡದ ಪಾಲುರುಮಾಲುಅರ್ಜುನಮುದ್ದಣಭ್ರಷ್ಟಾಚಾರಮಾನವ ಅಭಿವೃದ್ಧಿ ಸೂಚ್ಯಂಕಹಿಂದೂ ಮಾಸಗಳುಹೊಯ್ಸಳದ್ರಾವಿಡ ಭಾಷೆಗಳುಸಿದ್ದಲಿಂಗಯ್ಯ (ಕವಿ)ಕೇಂದ್ರಾಡಳಿತ ಪ್ರದೇಶಗಳುಕಾರ್ಲ್ ಮಾರ್ಕ್ಸ್ಸವರ್ಣದೀರ್ಘ ಸಂಧಿಬ್ಯಾಂಕ್ಜನತಾ ದಳಪಪ್ಪಾಯಿಮೊಘಲ್ ಸಾಮ್ರಾಜ್ಯವೇಗೋತ್ಕರ್ಷಕರ್ನಾಟಕದ ಕಲೆ ಮತ್ತು ಸಂಸ್ಕೃತಿಅಕ್ಕಮಹಾದೇವಿಸ್ವಾಮಿ ವಿವೇಕಾನಂದಯೂನಿಲಿವರ್ಜ್ಯೋತಿಕಾ (ನಟಿ)ಕನ್ನಡಪ್ರಭಹಲ್ಮಿಡಿಜೀನ್-ಜಾಕ್ವೆಸ್ ರೂಸೋಜಲ ಮಾಲಿನ್ಯಶೈಕ್ಷಣಿಕ ಮನೋವಿಜ್ಞಾನಶಾಲಿವಾಹನ ಶಕೆಕರ್ನಾಟಕದ ಮುಖ್ಯಮಂತ್ರಿಗಳುಭಾರತದ ಗಡಿಗಳು ಮತ್ತು ನರೆ ರಾಜ್ಯಗಳುಮಹಾಕಾವ್ಯಮದಕರಿ ನಾಯಕಕವಿರಾಜಮಾರ್ಗಕನ್ನಡದಲ್ಲಿ ಕಾದಂಬರಿ ಸಾಹಿತ್ಯದಾಸವಾಳಭಾರತದಲ್ಲಿ ಬ್ರಿಟಿಷ್ ಆಳ್ವಿಕೆವ್ಯಕ್ತಿತ್ವಭಾರತದ ಬುಡಕಟ್ಟು ಜನಾಂಗಗಳುಆದಿಪುರಾಣಭಾರತೀಯ ೫೦೦ ಮತ್ತು ೧೦೦೦ ರೂಪಾಯಿ ನೋಟುಗಳ ಚಲಾವಣೆ ರದ್ದತಿಚಂದ್ರಯಾನ-೧ವರ್ಗೀಯ ವ್ಯಂಜನರಾಯಲ್ ಚಾಲೆಂಜರ್ಸ್ ಬೆಂಗಳೂರು21ನೇ ಶತಮಾನದ ಕೌಶಲ್ಯಗಳುಕಪ್ಪೆಬ್ಯಾಂಕ್ ಖಾತೆಗಳುವಿಶ್ವ ಮಹಿಳೆಯರ ದಿನಗ್ರಹಕುಂಡಲಿಪುನೀತ್ ರಾಜ್‍ಕುಮಾರ್ಭಾರತದ ಮುಖ್ಯ ನ್ಯಾಯಾಧೀಶರುದುರ್ಗಸಿಂಹಸರ್ಕಾರೇತರ ಸಂಸ್ಥೆಹಂಪೆಅಂತಿಮ ಸಂಸ್ಕಾರಅಭಿಮನ್ಯು🡆 More