ಎಂ. ಎಸ್. ಉಮೇಶ್

ಎಂ.

ಎಸ್. ಉಮೇಶ್ (ಏಪ್ರಿಲ್ ೨೨, ೧೯೪೫) ಕನ್ನಡ ವೃತ್ತಿ ರಂಗಭೂಮಿ ಮತ್ತು ಚಲನಚಿತ್ರರಂಗದ ಜನಪ್ರಿಯ ಹಾಸ್ಯ ಕಲಾವಿದರು. “ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ..... ಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..” ಹೀಗೆ ತಮ್ಮ ಅಸಾಮಾನ್ಯ ರೀತಿಯ ಸಂಭಾಷಣೆ, ಅಭಿನಯ, ಅಭಿವ್ಯಕ್ತಿಗಳಿಂದ ಕನ್ನಡ ಚಿತ್ರರಸಿಕರ ಮನವನ್ನು ಇನ್ನಿಲ್ಲದಂತೆ ಗೆದ್ದವರು ಎಂ. ಎಸ್. ಉಮೇಶ್.

ಎಂ. ಎಸ್. ಉಮೇಶ್
Bornಏಪ್ರಿಲ್ ೨೨, ೧೯೪೫
ಮೈಸೂರು
Occupationರಂಗಭೂಮಿ ಮತ್ತು ಚಲನಚಿತ್ರ ನಟ
Years active೧೯೪೮ – ಪ್ರಸಕ್ತದವರೆಗೆ

ಜೀವನ

ಉಮೇಶ್‌ರವರು ಏಪ್ರಿಲ್ ೨೨, ೧೯೪೫ರ ವರ್ಷದಂದು ಮೈಸೂರಿನಲ್ಲಿ ಜನಿಸಿದರು. ಅವರ ತಂದೆ ಎ.ಎಲ್. ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸಿದವರು ಉಮೇಶ್. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅವರಿಗೆ ಅಭಿನಯಿಸಲು ಪ್ರಚೋದನೆ ನೀಡಲಾಗುತ್ತಿತ್ತಂತೆ.

ನಾಟಕ ರಂಗದಲ್ಲಿ

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು.. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ. ಮಾಸ್ಟರ್‌ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಉಮೇಶ್ ಖ್ಯಾತಿ ಗಳಿಸಿದ್ದರು. ಅವರು ಹಾಡಬಲ್ಲವರು ಕೂಡಾ.

'ಮಕ್ಕಳರಾಜ್ಯ'ದಲ್ಲಿ

೧೯೫೯ರಲ್ಲಿ ಅಭಿನಯಿಸಿದ್ದ ಇವರ ಚಂದ್ರಹಾಸನ ಪಾತ್ರ ಪಡೆದ ಜನಮೆಚ್ಚುಗೆಯಿಂದ ಬಿ. ಆರ್‌.ಪಂತುಲು ಅವರ ‘ಮಕ್ಕಳ ರಾಜ್ಯ’ ಚಲನ ಚಿತ್ರಕ್ಕಾಗಿ ಪ್ರಧಾನ ಪಾತ್ರಕ್ಕೆ ಆಯ್ಕೆಯಾದರು. ಇವರನ್ನು ಹೀಗೆ ಆಯ್ಕೆಮಾಡಿದ್ದವರು ಅಂದಿನ ದಿನದಲ್ಲಿ ಪಂತುಲು ಅವರ ಸಹಾಯಕರಾಗಿದ್ದ ಎಸ್. ಆರ್ ಪುಟ್ಟಣ್ಣ ಕಣಗಾಲರು. ಈ ಮಧ್ಯೆ ನಾಟಕಕಾರ ಎಚ್.ಕೆ. ಯೋಗಣ್ಣವರ ಉದಯ ಕಲಾ ನಾಟಕ ಮಂಡಲಿಯಲ್ಲಿ ಇವರು ಕೆಲ ಕಾಲ ನಟನಾ ವೃತ್ತಿಯಲ್ಲಿದ್ದರು.

ಚಿತ್ರರಂಗದಲ್ಲಿ ಹಾಸ್ಯನಟರಾಗಿ

ಮುಂದೆ ೧೯೭೪ರಲ್ಲಿ ಉಮೇಶ್, ಪುಟ್ಟಣ್ಣ ಕಣಗಾಲರ ‘ಕಥಾ ಸಂಗಮ’ ಚಲನ ಚಿತ್ರದ ತಿಮ್ಮರಾಯಿ ಪಾತ್ರಕ್ಕಾಗಿ ಉಮೇಶ್ ಆಯ್ಕೆಯಾದರು. ಇದಾದ ನಂತರ ಅವರ ಚಿತ್ರರಂಗದ ನಂಟು ಬೆಳೆಯುತ್ತಾ ಬಂದಿತು. ಗೋಲ್ ಮಾಲ್ ರಾಧಾಕೃಷ್ಣ, ಗುರು ಶಿಷ್ಯರು ಮುಂತಾದ ಚಿತ್ರಗಳಿಂದ ಇತ್ತೀಚಿನ ವೆಂಕಟ ಇನ್ ಸಂಕಟವರೆಗಿನ ಅವರ ಪಾತ್ರಗಳನ್ನು ಮೆಚ್ಚದಿರುವವರೇ ಇಲ್ಲ. ಇದುವರೆಗೂ ೩೫೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ಉಮೇಶರದ್ದು..

ಪ್ರಶಸ್ತಿ ಗೌರವಗಳು

'ಕಥಾಸಂಗಮದ' ಎಂಬ ಮೂರು ಕಥಾನಕಗಳ ಚಿತ್ರವಾದ ಮುನಿತಾಯಿಯಲ್ಲಿ 'ತಿಮ್ಮರಾಯಿ' ಪಾತ್ರಕ್ಕೆ ಉತ್ತಮ ಪೋಷಕನಟ ಪ್ರಶಸ್ತಿ, ೧೯೯೪ರಲ್ಲಿ ನಾಟಕ ಅಕಾಡಮಿ ಪ್ರಶಸ್ತಿ, ೧೯೯೭ರಲ್ಲಿ ಮಹಾನಗರ ಪಾಲಿಕೆ ಪ್ರಶಸ್ತಿ. ಆತ್ಮಚರಿತ್ರೆ ‘ಬಣ್ಣದ ಘಂಟೆ’ಗೆ ವಿಶ್ವೇಶ್ವರಯ್ಯ ಪ್ರತಿಷ್ಠಾನ ಪ್ರಶಸ್ತಿ ಮುಂತಾದ ಹಲವಾರು ಗೌರವಗಳು ಉಮೇಶರನ್ನು ಅರಸಿಬಂದಿವೆ. ಉಮೇಶರ ಐದು ದಶಕಗಳ ಚಿತ್ರರಂಗದಲ್ಲಿನ ಕಾಯಕವನ್ನು ಚಿತ್ರರಂಗವು ಗೌರವಿಸಿತು.

ಬಹುಮುಖ ಪ್ರತಿಭೆ

ಉಮೇಶರು ಹಲವಾರು ಪತ್ರಿಕೆಗಳ ಅಂಕಣ ಬರಹಗಾರರೂ ಹೌದು. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ಉಮೇಶರು ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು ನಮ್ಮೂರಲ್ಲೊಂದು ನಾಟಕ, ಸಮಸ್ಯೆಯ ಸರಮಾಲೆ, ರಿಜಿಸ್ಟರ್‌ ಫೋಸ್ಟ್, ಅಂಚು-ಸಂಚು, ಗೌಡತಿ ಗೌರಮ್ಮ, ಸಂಸಾರದಲ್ಲಿ SOMEಕ್ರಾಂತಿ, ಜೋಕ್ಸ್‌ಫಾಲ್ಸ್, ಗಲಿಬಿಲಿ ಸಂಸಾರ ಮುಂತಾದುವು.

ಉಮೇಶ್ ಎಂದರೆ ಹಿರಿಯರಿಗೂ ಗೌರವ

ಉಮೇಶ್ ಎಂದರೆ ಹಿರಿಯ ನಟರಿಗೂ ಗೌರವ. ರಾಜಕುಮಾರ್ ಅವರ ಕಟ್ಟ ಕಡೆಯ ಚಿತ್ರಗಳವರೆಗೆ ಬಹುತೇಕ ಚಿತ್ರಗಳಲ್ಲಿ ಉಮೇಶ್ ನಟಿಸಿದ್ದರು. ಒಮ್ಮೆ ಉಮೇಶರ ಹುಟ್ಟು ಹಬ್ಬ ಎಂದು ಅರಿತ ವಿಷ್ಣುವರ್ಧನ ಅವರು ಸಿನಿಮಾ ಸೆಟ್ಟಿನಲ್ಲೇ ಅವರ ಹುಟ್ಟುಹಬ್ಬ ಆಚರಿಸುವ ಏರ್ಪಾಡು ಮಾಡಿ ಈ ನಟನಿಗೆ ಗೌರವ ಸಲ್ಲುವಂತೆ ನಡೆದುಕೊಂಡರು. “ಅಂದಿನ ಕಪ್ಪು ಬಿಳುಪು ಜಗತ್ತಿನಿಂದ ಇಲ್ಲಿಯವರೆಗಿನ ಕನ್ನಡ ಚಿತ್ರರಂಗದ ಯಾತ್ರೆ ಅದ್ಬುತ. ಈ ಯಶಸ್ಸಿನ ಹಾದಿಯನ್ನು ನೋಡಿರುವ ನಾನೇ ಪುಣ್ಯವಂತ” ಎಂಬುದು ಉಮೇಶರ ಮಾತು.

ಅನಿವಾರ್ಯತೆ

ಬದುಕಿನ ಬಂಡಿಗಾಗಿ ಇಂತಹ ಹಿರಿಯವಯಸ್ಸಿನಲ್ಲೂ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಲೇಬೇಕಾದ ಅನಿವಾರ್ಯತೆ ಉಮೇಶ್ ಅಂತಹ ಕಲಾವಿದರಿಗಿದೆ ಎಂಬುದು ಮತ್ತೊಂದು ವಾಸ್ತವ ಜಗತ್ತನ್ನು ತೆರೆದಿಡುತ್ತದೆ. ಇಂಥಹ ಹಿರಿಯರ ಹಿರಿತನದ ಬದುಕು ಸುಗಮವಾಗಿರಲಿ ಎಂಬುದು ಕಲಾಭಿಮಾನಿಗಳ ಹೃತ್ಪೂರ್ವಕ ಆಶಯ

Tags:

ಎಂ. ಎಸ್. ಉಮೇಶ್ ಜೀವನಎಂ. ಎಸ್. ಉಮೇಶ್ ನಾಟಕ ರಂಗದಲ್ಲಿಎಂ. ಎಸ್. ಉಮೇಶ್ ಮಕ್ಕಳರಾಜ್ಯದಲ್ಲಿಎಂ. ಎಸ್. ಉಮೇಶ್ ಚಿತ್ರರಂಗದಲ್ಲಿ ಹಾಸ್ಯನಟರಾಗಿಎಂ. ಎಸ್. ಉಮೇಶ್ ಪ್ರಶಸ್ತಿ ಗೌರವಗಳುಎಂ. ಎಸ್. ಉಮೇಶ್ ಬಹುಮುಖ ಪ್ರತಿಭೆಎಂ. ಎಸ್. ಉಮೇಶ್ ಉಮೇಶ್ ಎಂದರೆ ಹಿರಿಯರಿಗೂ ಗೌರವಎಂ. ಎಸ್. ಉಮೇಶ್ ಅನಿವಾರ್ಯತೆಎಂ. ಎಸ್. ಉಮೇಶ್ಏಪ್ರಿಲ್ ೨೨೧೯೪೫

🔥 Trending searches on Wiki ಕನ್ನಡ:

ತುಂಗಭದ್ರ ನದಿಆರೋಗ್ಯಗೋತ್ರ ಮತ್ತು ಪ್ರವರರಮ್ಯಾಯಕೃತ್ತುಕಾಂತಾರ (ಚಲನಚಿತ್ರ)ಲಗೋರಿಹೊಯ್ಸಳ ವಿಷ್ಣುವರ್ಧನಚಾಣಕ್ಯಕರ್ನಾಟಕಬಸವ ಜಯಂತಿಅಸ್ಪೃಶ್ಯತೆ೧೬೦೮ವಿಜಯಪುರರಾಜ್ಯಸಭೆಚದುರಂಗ (ಆಟ)ನೀರಾವರಿನವರತ್ನಗಳುಚಂಡಮಾರುತಸತ್ಯ (ಕನ್ನಡ ಧಾರಾವಾಹಿ)ವಾಲಿಬಾಲ್ಗ್ರಾಮ ಪಂಚಾಯತಿಕರ್ನಾಟಕದ ಕಲೆ ಮತ್ತು ಸಂಸ್ಕೃತಿರಚಿತಾ ರಾಮ್ಸವರ್ಣದೀರ್ಘ ಸಂಧಿರವಿಚಂದ್ರನ್ಮಾನವ ಹಕ್ಕುಗಳುಬಯಲಾಟಪಠ್ಯಪುಸ್ತಕಇ-ಕಾಮರ್ಸ್ಋತುರತನ್ ನಾವಲ್ ಟಾಟಾಕನ್ನಡ ರಾಜ್ಯೋತ್ಸವಸೂರ್ಯ (ದೇವ)ಅವತಾರಬೆಂಗಳೂರುಭಾರತೀಯ ಸಂಸ್ಕೃತಿವಾದಿರಾಜರುಜೀವವೈವಿಧ್ಯಅನುಶ್ರೀಮಾಹಿತಿ ತಂತ್ರಜ್ಞಾನಗೂಬೆಹೆಚ್.ಡಿ.ದೇವೇಗೌಡಭಾರತೀಯ ಧರ್ಮಗಳುದೇವರ/ಜೇಡರ ದಾಸಿಮಯ್ಯಎಸ್.ಜಿ.ಸಿದ್ದರಾಮಯ್ಯಶ್ರೀ ಅಣ್ಣಮ್ಮ ದೇವಿ ದೇವಾಲಯ, ಬೆಂಗಳೂರುಅಂತರ್ಜಲಆದಿ ಶಂಕರಹಾಗಲಕಾಯಿಹಂಪೆವರ್ಗೀಯ ವ್ಯಂಜನಹೆಸರುವಿಕಿಪೀಡಿಯವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)ವಿಜಯ್ ಮಲ್ಯಕನ್ನಡದಲ್ಲಿ ಮಹಿಳಾ ಸಾಹಿತ್ಯಉದಯವಾಣಿಕರ್ನಾಟಕದ ಶಾಸನಗಳುಹಿಂದೂ ಮಾಸಗಳುಬುಡಕಟ್ಟುಕ್ರೈಸ್ತ ಧರ್ಮಶ್ರವಣಬೆಳಗೊಳ1935ರ ಭಾರತ ಸರ್ಕಾರ ಕಾಯಿದೆಮಹಮದ್ ಬಿನ್ ತುಘಲಕ್ವಿನಾಯಕ ಕೃಷ್ಣ ಗೋಕಾಕಕವಿಹಣಬಹುವ್ರೀಹಿ ಸಮಾಸಕರ್ನಾಟಕದ ಏಕೀಕರಣಜಯಪ್ರಕಾಶ ನಾರಾಯಣಬಾಬು ಜಗಜೀವನ ರಾಮ್ಕರ್ಮಒನಕೆ ಓಬವ್ವಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಶಿವಪ್ಪ ನಾಯಕಗೊರೂರು ರಾಮಸ್ವಾಮಿ ಅಯ್ಯಂಗಾರ್ಚಾಲುಕ್ಯ🡆 More