ಕೆ ಎಸ್ ಅಶ್ವಥ್: ಭಾರತೀಯ ನಟ

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್-೧೯೨೫-೨೦೧೦) ಅವರು ಮೈಸೂರಿನಲ್ಲಿ ೨೫.೦೩.೧೯೨೫ರಲ್ಲಿ ಜನಿಸಿದರು..

ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ.

ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್
ಕೆ ಎಸ್ ಅಶ್ವಥ್: ವ್ಯಕ್ತಿ ಪರಿಚಯ, ನಟಿಸಿದ ಚಿತ್ರಗಳು, ಪ್ರಶಸ್ತಿಗಳು
ಕೆ ಎಸ್ ಅಶ್ವಥ್
ಹುಟ್ಟು ಹೆಸರು
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಅಶ್ವತ್ಥನಾರಾಯಣ
(೧೯೨೫-೦೩-೨೫)೨೫ ಮಾರ್ಚ್ ೧೯೨೫
ಮೈಸೂರು,ಕರ್ನಾಟಕ,ಭಾರತ
ನಿಧನ ಕರ್ನಾಟಕ,ಭಾರತ
ಬೇರೆ ಹೆಸರುಗಳು ಚಾಮಯ್ಯ ಮೇಷ್ಟ್ರು, ಕೆ ಎಸ್ ಅಶ್ವಥ್
ವೃತ್ತಿ ನಟ, ಪೋಷಕ ನಟ
ವರ್ಷಗಳು ಸಕ್ರಿಯ ೧೯೨೫–೨೦೧೦

ವ್ಯಕ್ತಿ ಪರಿಚಯ

೧೯೫೫ರಲ್ಲಿ ನಿರ್ಮಾಣವಾದ ಸ್ರೀ ರತ್ನ ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ ಅವಧಿಯಲ್ಲಿ ೩೫೦ಕ್ಕಿಂತಲೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಜನಪ್ರಿಯ ನಟ. ಶಿಸ್ತು, ಸಮಯಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರ ನಿರ್ಮಾಣವಲಯದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾದ ವ್ಯಕ್ತಿ ಅಶ್ವತ್ಥ್. ಅವರ ಹಿರಿಯರು ಹೊಳೆನರಸೀಪುರ ತಾಲ್ಲೂಕಿನ ಕರಗದಹಳ್ಳಿಯವರು. ತಂದೆ ಸುಬ್ಬರಾಯರು. ಮಾರ್ಚ್ ೨೫, ೧೯೨೫ರಲ್ಲಿ ಜನನ. ಮೊದಲ ಹೆಸರು ಅಶ್ವತ್ಥನಾರಾಯಣ. ಚಿತ್ರರಂಗಕ್ಕೆ ಬಂದ ನಂತರ ನಾರಾಯಣ ಕಳಚಿಕೊಂಡಿತು. ಓದಿದ್ದು ಇಂಟರಮಿಡಿಯಟವರೆಗೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಹಭಾಗಿ, ಆಹಾರ ಇಲಾಖೆಯಲ್ಲಿ ನೌಕರಿ(೧೯೪೪), ನಾಟಕದ ಗೀಳು, ಆಕಾಶವಾಣಿಯಲ್ಲಿ ನಾಟಕ ವಿಭಾಗದಲ್ಲಿ ದುಡಿಮೆ; ನಾಟಕ ವಿಭಾಗದ ಮುಖ್ಯಸ್ಥರಾಗಿದ್ದ ಎನ್.ಎಸ್. ವಾಮನರಾಯರಿಂದ ಅಭಿನಯದಲ್ಲಿ ತರಬೇತಿ ಪಡೆಯುವ ಅವಕಾಶ ಲಭ್ಯ. ಅಶ್ವತ್ಥ್ ಅವರಿಗೆ ಚಲನಚಿತ್ರ ಸೇರಬೇಕೆಂಬ ಕಲ್ಪನೆಯೇ ಇರಲಿಲ್ಲ. ಅವಕಾಶ ಅದಾಗಿಯೇ ಬಂದಿತು. ನಾಟಕದಲ್ಲಿನ ಇವರ ಅಭಿನಯ ನೋಡಿ ಮೆಚ್ಚಿದ ಹಿರಿಯ ನಿರ್ದೇಶಕ ಕೆ.ಸುಬ್ರಹ್ಮಣ್ಯಂ ಅವರಿಂದ ಚಿತ್ರರಂಗಕ್ಕೆ ಆಹ್ವಾನ. ಮೈಸೂರಿನ ಪ್ರಿಮಿಯರನಲ್ಲಿ ತಯಾರಾದ, ಭಾಗಶಃ ವರ್ಣದಲ್ಲಿ ಚಿತ್ರಣವಾದ ‘ಸ್ತ್ರೀ ರತ್ನ’(೧೯೫೫) ಚಿತ್ರದಲ್ಲಿ ನಾಯಕ. ‘ಸ್ತ್ರೀ ರತ್ನ’ ಚಿತ್ರದ ನಂತರ, ಚಿತ್ರರಂಗದಲ್ಲೆ ಮುಂದುವರೆಯುವ ನಿರ್ಧಾರ. ಆದರೆ ಆ ಅವಧಿಯಲ್ಲಿ ಕನ್ನಡ ಚಿತ್ರ ನಿರ್ಮಾಣ ಚಟುವಟಿಕೆ ಮಂದಗತಿಯಲ್ಲಿ ಸಾಗಿತ್ತು. ಆದರೂ ಚಿತ್ರರಂಗದ ಅಭಿನಯವನ್ನೇ ವೃತ್ತಿಯಾಗಿ ಸ್ವೀಕರಿಸಲು ಸಂಕಲ್ಪಿಸಿದ್ದ ಅಶ್ವತ್ಥ್, ಆಗ ಕನ್ನಡ ಚಿತ್ರ ನಿರ್ಮಾಣದ ಕೇಂದ್ರವಾಗಿದ್ದ ಮದರಾಸಿನಲ್ಲೇ ನೆಲೆಸಲು ನಿರ್ಧರಿಸಿದರು. ನಾಯಕ ಪಾತ್ರಗಳಿಂದ ಸರಿದು ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಸಂಕಲ್ಪ ಮಾಡಿದರು (೧೯೬೦). ಈ ನಿರ್ಧಾರವೂ ಯೋಗ್ಯವಾದುದೇ. ಇದರಿಂದ ಅವರ ಬಹುಮುಖ ಪ್ರತಿಭೆಯು ಪ್ರಕಾಶಕ್ಕೆ ಮುಕ್ತ ಅವಕಾಶ ದೊರೆಯಿತು. ಆರಂಭದ ದಿನಗಳಲ್ಲಿ ತಯಾರಾಗುತ್ತಿದ್ದದು ಹೆಚ್ಚಾಗಿ ಪೌರಾಣಿಕ ಹಾಗೂ ಭಕ್ತಿ ಪ್ರಧಾನ ಚಿತ್ರಗಳು. ಪೌರಾಣಿಕ ಭಕ್ತಿ ಪ್ರಧಾನ ಚಿತ್ರಗಳಲ್ಲಿ ನಾರದನ ಪಾತ್ರಗಳು ಅರಸಿ ಬಂದವು. ‘ಮಹಿಷಾಸುರ ಮರ್ದಿನಿ’, ‘ಸ್ವರ್ಣಗೌರಿ’, ‘ಭಕ್ತ ಪ್ರಹ್ಲಾದ’, ‘ದಶಾವತಾರ’, ‘ನಾಗಾರ್ಜುನ’-ಇವೇ ಮೊದಲಾದ ಚಿತ್ರಗಳಲ್ಲಿ ಅಶ್ವತ್ಥ್ ಅವರ ನಾರದನ ಪಾತ್ರ ಜನಮೆಚ್ಚುಗೆ ಪಡೆಯಿತು.

ಕೆ ಎಸ್ ಅಶ್ವಥ್: ವ್ಯಕ್ತಿ ಪರಿಚಯ, ನಟಿಸಿದ ಚಿತ್ರಗಳು, ಪ್ರಶಸ್ತಿಗಳು 

ಅಶ್ವತ್ಥ್ ವೈವಿಧ್ಯಮಯ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ; ಆ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಜನರಿಗೆ ಅಪ್ತವಾದುದು ತಂದೆಯ ಪಾತ್ರ; ಮನೆಯ ಹಿರಿಯಣ್ಣನ ಪಾತ್ರ, ‘ಗಾಳಿಗೋಪುರ’ ಚಿತ್ರದಿಂದ ಶಾಶ್ವತವಾಗಿ ಪ್ರಧಾನ ಪೋಷಕ ಪಾತ್ರಗಳಿಗೆ ಆಯ್ಕೆ. ‘ನಾಗರಹಾವು’ ಚಿತ್ರದ ಚಾಮಯ್ಯ ಮೇಸ್ಟ್ರು, ಮಕ್ಕಳಿಲ್ಲದ ಮೇಸ್ಟ್ರು. ತಾನು ಅತಿಯಾಗಿ ಪ್ರೀತಿಸುವ ತಂಟೆಕೋರ ವಿದ್ಯಾರ್ಥಿ. ಇವರಿಬ್ಬರ ನಡುವಣ ಮಾನವೀಯ ಸಂಬಂಧಗಳು, ಸಮಸ್ಯೆಗಳು, ದುರಂತದಲ್ಲಿ ಕೊನೆಗೊಳ್ಳುವ ಈ ಚಿತ್ರದಲ್ಲಿ ಮನಮಿಡಿಯುವಂತಹ ಅಭಿನಯ. ‘ಕಸ್ತೂರಿ ನಿವಾಸ’ದ ನಿಷ್ಠಾವಂತ ಸೇವಕ ರಾಮಯ್ಯ, ‘ಮಗ ಮೊಮ್ಮಗ’, ‘ತಂದೆ-ಮಕ್ಕಳು’ ಚಿತ್ರದಲ್ಲಿ ತಂದೆಯಾಗಿ ನೀಡಿರುವ ಮನ ಮುಟ್ಟುವ ಅಭಿನಯ. ‘ಸರ್ವಮಂಗಳ’ ಚಿತ್ರದಲ್ಲಿ ಕುರೂಪಿ ಸುಬ್ಬರಾಯನ ಪಾತ್ರ, ಅಶ್ವತ್ಥ್ ಅವರ ಅಪ್ರತಿಮ ಪ್ರತಿಭೆಯ, ಭಾವಪೂರ್ಣ ಅಭಿನಯಕ್ಕೆ ಇವು ಕೆಲವು ನಿದರ್ಶನಗಳು. ಕುಟುಂಬದ ಯಜಮಾನ, ಒಲವಿನ ಸೋದರ, ತಂದೆ ಮೊದಲಾದ ಸಜ್ಜನಿಕೆಯ ಪಾತ್ರಗಳ ಜೊತೆಗೆ ಹಾಸ್ಯ ಪಾತ್ರಗಳಲ್ಲೂ ಖಳನಾಯಕನ ಪಾತ್ರಗಳಲ್ಲೂ ಅವರು ಸಹಜವಾಗಿ ಅಭಿನಯಿಸಿದ್ದಾರೆ. ಪುಟ್ಟ ಪಾತ್ರಗಳಲ್ಲಿ ಚೊಕ್ಕ ಅಭಿನಯ ಇದು ಅವರ ಹಿರಿಮೆ. ಪ್ರಧಾನ ಪೋಷಕ ಚಿತ್ರಗಳಲ್ಲಿ ಅಶ್ವತ್ಥ-ಪಂಢರಿಬಾಯಿ ಜೋಡಿ ಅತ್ಯಂತ ಜನಪ್ರಿಯ.

‘ನಮ್ಮ ಮಕ್ಕಳು’, ‘ನಾಗರಹಾವು’, ‘ಮುತ್ತಿನಹಾರ’ ಚಿತ್ರಗಳ ಅಭಿನಯಕ್ಕಾಗಿ ‘ಶ್ರೇಷ್ಠ ಪೋಷಕ ನಟ’ರಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ತಮ್ಮ ಅಭಿನಯ, ಗಾಯನದಿಂದ ಕನ್ನಡ ಚಲನಚಿತ್ರೋದ್ಯಮಕ್ಕೆ ಘನತೆ, ಸ್ಥಿರತೆ ತಂದ ಡಾ.ರಾಜಕುಮಾರ್ ಹೆಸರಿನಲ್ಲಿ ಸರಕಾರ ಚಲನಚಿತ್ರರಂಗಕ್ಕೆ ಅಮೋಘ ಸೇವೆ ಸಲ್ಲಿಸಿದವರಿಗೆ ೧೯೯೩-೯೪ನೇ ಸಾಲಿನಿಂದ ಪ್ರಶಸ್ತಿ ನೀಡುತ್ತಿದೆ. ಈ ಪ್ರಶಸ್ತಿಗೆ ಭಾಜನರಾದ ಪ್ರಪ್ರಥಮ ನಟ-ಕೆ.ಎಸ್. ಅಶ್ವತ್ಥ್. ೧೯೯೫ರಲ್ಲಿ ಅಶ್ವತ್ಥ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದರು. ಅದು ಅವರ ಅಭಿಮಾನಿ ಪ್ರೇಕ್ಷಕರಿಗೆ ಅಘಾತವಾಗಿತ್ತು. ಆದರೆ ‘ಶಬ್ದವೇಧಿ’ ಚಿತ್ರದ ಮೂಲಕ ಅವರ ಪುನರಾಗಮನವನ್ನು ಜನರು ಸಂಭ್ರಮದಿಂದ ಸ್ವಾಗತಿಸಿದರು.

ತಂದೆಯಾಗಿ, ಸಹೋದರನಾಗಿ, ಪತಿಯಾಗಿ, ತಾತನಾಗಿ, ನಾರದನಾಗಿ, ಹಳ್ಳಿಗನಾಗಿ, ಪಟ್ಟಣಿಗನಾಗಿ, ಗುರುವಾಗಿ, ಅಧಿಕಾರಿಯಾಗಿ, ಸೇವಕನಾಗಿ, ಋಷಿಯಾಗಿ ಹೀಗೆ ವಿಭಿನ್ನ ನೆಲೆಗಳಲ್ಲಿ ಅವರು ಅವರ ಪಾತ್ರಗಳಿಗೆ ನೀಡಿದ ಬೆಲೆ ಅಸದೃಶವಾದದ್ದು. ಅವರನ್ನು ನಾವು ನೋಡಿದ ಇಷ್ಟಪಟ್ಟ ಒಂದೆರಡು ಪಾತ್ರಗಳ ನೆಲೆಯಲ್ಲಿ ಅವಲೋಕಿಸುವುದಕ್ಕಿಂತ ತಾವು ನಟಿಸಿದ ಪಾತ್ರಗಳಲ್ಲೆಲ್ಲ ಅವರು ತುಂಬಿದ ಸಹಜತೆಯ ಆಳದಲ್ಲಿ ಅವರಿಗೆ ಇದ್ದ ಸಾಮರ್ಥ್ಯ, ಜೀವಂತಿಕೆ, ನಿಷ್ಠೆ ಜೊತೆಗೆ ಇವೆಲ್ಲಕ್ಕೂ ಮಿಗಿಲಾಗಿ ತಮ್ಮನ್ನು ಸಾಮಾನ್ಯನಂತೆ ಕಂಡುಕೊಳ್ಳುವ ವಿಧೇಯತೆ, ಬದುಕಿನ ಜೊತೆ ಹೊಂದಿದ್ದ ಸಾಮೀಪ್ಯತೆ ಇತ್ಯಾದಿಗಳಿಂದ ಅವರನ್ನು ನೋಡುವುದು ಅತ್ಯಂತ ಮಹತ್ವದ್ದೆನಿಸುತ್ತದೆ.

ನಟಿಸಿದ ಚಿತ್ರಗಳು

ಪ್ರಶಸ್ತಿಗಳು

ಉಲ್ಲೇಖಗಳು

Tags:

ಕೆ ಎಸ್ ಅಶ್ವಥ್ ವ್ಯಕ್ತಿ ಪರಿಚಯಕೆ ಎಸ್ ಅಶ್ವಥ್ ನಟಿಸಿದ ಚಿತ್ರಗಳುಕೆ ಎಸ್ ಅಶ್ವಥ್ ಪ್ರಶಸ್ತಿಗಳುಕೆ ಎಸ್ ಅಶ್ವಥ್ ಉಲ್ಲೇಖಗಳುಕೆ ಎಸ್ ಅಶ್ವಥ್ಕನ್ನಡ ಚಿತ್ರರಂಗಕಲಾವಿದನಾಗರಹಾವು

🔥 Trending searches on Wiki ಕನ್ನಡ:

ಭಾರತದಲ್ಲಿನ ಜಾತಿ ಪದ್ದತಿಮೋಳಿಗೆ ಮಾರಯ್ಯಜಾತಿಕೃಷ್ಣಹಾವಿನ ಹೆಡೆಗಾದೆಒಡೆಯರ್ಬಿಜಾಪುರ (ಲೋಕ ಸಭೆ ಚುನಾವಣಾ ಕ್ಷೇತ್ರ)ಮೈಸೂರು ಸಂಸ್ಥಾನದ್ವಿರುಕ್ತಿಆದಿಚುಂಚನಗಿರಿಬಾಲ್ಯ ವಿವಾಹಎರಡನೇ ಮಹಾಯುದ್ಧಕರ್ನಾಟಕದ ಏಕೀಕರಣಕರ್ನಾಟಕ ಹೈ ಕೋರ್ಟ್ಕನ್ನಡ ಸಾಹಿತ್ಯಸಂಶೋಧನೆಮೊಘಲ್ ಸಾಮ್ರಾಜ್ಯಕರ್ನಾಟಕದ ನದಿಗಳುತಂತ್ರಜ್ಞಾನಭಾಷೆಚಿನ್ನಬಿಳಿ ರಕ್ತ ಕಣಗಳುನವೋದಯಕರಗ (ಹಬ್ಬ)ಹುಬ್ಬಳ್ಳಿನ್ಯೂ ಜೀಲ್ಯಾಂಡ್ ಕ್ರಿಕೆಟ್ ತಂಡಹವಾಮಾನಭಗತ್ ಸಿಂಗ್ರಾಶಿದಕ್ಷಿಣ ಕನ್ನಡಹಿಂದೂ ಮಾಸಗಳುಮೈಗ್ರೇನ್‌ (ಅರೆತಲೆ ನೋವು)ರಾಘವಾಂಕಸಾವಯವ ಬೇಸಾಯಭಾರತದ ಸಂಸತ್ತುಭರತನಾಟ್ಯಸ್ವರಾಜ್ಯಮಜ್ಜಿಗೆಜಿ.ಎಸ್.ಶಿವರುದ್ರಪ್ಪಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳುಕರ್ನಾಟಕ ವಿಧಾನ ಪರಿಷತ್ಡಿ.ಕೆ ಶಿವಕುಮಾರ್ಪಾಂಡವರುರಾಮಾಯಣಮಾತೃಭಾಷೆವರ್ಗೀಯ ವ್ಯಂಜನಕನ್ನಡ ಸಾಹಿತ್ಯ ಪ್ರಕಾರಗಳುರಮ್ಯಾಕೈಗಾರಿಕೆಗಳುನುಗ್ಗೆಕಾಯಿಸಂಭೋಗಧರ್ಮಸ್ಥಳಬಹಮನಿ ಸುಲ್ತಾನರುಹೊಯ್ಸಳಚಿಲ್ಲರೆ ವ್ಯಾಪಾರಮಾಸ್ತಿ ವೆಂಕಟೇಶ ಅಯ್ಯಂಗಾರ್ಕೃಷಿಗುಪ್ತ ಸಾಮ್ರಾಜ್ಯರಾಷ್ಟ್ರೀಯ ಶಿಕ್ಷಣ ನೀತಿರವಿಕೆದೇವಸ್ಥಾನರಸ(ಕಾವ್ಯಮೀಮಾಂಸೆ)ಕೆ. ಎಸ್. ನರಸಿಂಹಸ್ವಾಮಿಕಪ್ಪೆ ಅರಭಟ್ಟಅಭಿಮನ್ಯುಅಶ್ವತ್ಥಮರಸಂಗೊಳ್ಳಿ ರಾಯಣ್ಣ೨೦೨೪ ಸಂಯುಕ್ತ ಅರಬ್ ಸಂಸ್ಥಾನ ತ್ರಿ-ರಾಷ್ಟ್ರ ಸರಣಿ (ಸುತ್ತು ೨)ವೇಶ್ಯಾವೃತ್ತಿದುಶ್ಯಲಾರಾಧೆಭಾರತದಲ್ಲಿ ಬಡತನಮಹಾವೀರಬುಡಕಟ್ಟುಜ್ಯೋತಿಷ ಶಾಸ್ತ್ರದ ನಕ್ಷತ್ರಗಳುಶಕ್ತಿ🡆 More